ಬೆಂಗಳೂರು : ಮುಂದಿನ ಐದು ದಿನ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಎರಡೂ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 29ರಿಂದ 31ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಭಾರಿ ಮಳೆಯಾಗುವ ಸಂಭವ ಇದೆ. ಆಗಸ್ಟ್ 30, 31ರಂದು ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿಯಲ್ಲಿ ಹೆಚ್ಚಿನ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಉಳಿದಂತೆ ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ.