ಬೆಂಗಳೂರು : ರಾಜ್ಯದಲ್ಲಿ ಮುಂದಿನ 7 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಕಡೆ ಕಳೆದ 1 ವಾರದಿಂದ ಭರ್ಜರಿ ಮಳೆಯಾಗುತ್ತಿದ್ದು, ಜುಲೈ 4ರವರೆಗೆ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪ, ಎನ್ಆರ್ ಪುರ, ಮೂಡಿಗೆರೆ, ಕಳಸ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಗೆ ನದಿ ಹಳ್ಳಗಳು ಉಕ್ಕಿ ಹರಿಯುತ್ತಿದೆ . ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದು, ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.