alex Certify Rain Alert Karnataka : ರಾಜ್ಯದಲ್ಲಿ ಅ.17 ರವರೆಗೆ ಭಾರಿ ಮಳೆ : 18 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain Alert Karnataka : ರಾಜ್ಯದಲ್ಲಿ ಅ.17 ರವರೆಗೆ ಭಾರಿ ಮಳೆ  : 18 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಅ.17 ರವರೆಗೆ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಉಡುಪಿ, ಉತ್ತರ ಕರ್ನಾಟಕ, ಕೊಡಗು, ಬೆಂಗಳೂರು. ಬೆಂಗಳೂರು ಗ್ರಾಮಾಂತರ ಸೇರಿ ವಿವಿಧ ಕಡೆ ಅ.17 ರವರೆಗೆ ಭಾರಿ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗಬಹುದು.18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆಯ ತಜ್ಞ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 17ರ ವರೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ ಎಸ್ ಪಾಟೀಲ್ ಹೇಳಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...