ಬೆಂಗಳೂರು : ರಾಜ್ಯದಲ್ಲಿ ಮತ್ತೆ ಭಾರಿ ‘ಮಳೆ’ ಯಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.ಹೌದು. ಕಳೆದ ನಾಲ್ಕು ದಿನಗಳಿಂದ ಶಾಂತವಾಗಿದ್ದ ವರುಣ ಮತ್ತೆ ಅಬ್ಬರಿಸಲು ಸಿದ್ಧನಾಗಿದ್ದಾನೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 3ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅದೇ ರೀತಿ ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಆ 3 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಜುಲೈ 31ರಿಂದ ಆಗಸ್ಟ್ 3ರವರೆಗೆ 6ರಿಂದ 11 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು ನಗರದಲ್ಲಿ ಎರಡು ದಿನದಿಂದ ತುಂತುರು ಮಳೆ ಆಗಿದ್ದು, ಭಾನುವಾರ ಆಗಾಗ ಮೋದ ಕವಿದ ವಾತಾವರಣ ಕಂಡು ಬಂದಿದೆ.