ಬೆಂಗಳೂರು : ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವಾರು ಕಡೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. 5 ದಿನದ ಅವಧಿಯಲ್ಲಿ ಉತ್ತರ ಕರ್ನಾಟಕದಲ್ಲಿ ಚದುರಿದಂತೆ ಮಳೆಯಾಗುತ್ತದೆ ಎಂದು ತಿಳಿಸಿದೆ.
ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಬಿರುಗಾಳಿ ಸಹಿತ ಮಳೆಯಾಗಲಿದೆ. ಹಾಗೂ ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾದ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ಮುಂದಿನ ಐದು ದಿನಗಳ ಹವಾಮಾನ ವರದಿಯನ್ನು ಎಕ್ಸ್ನಲ್ಲಿ ಹಂಚಿಕೊಂಡಿದ್ದು, “ರಾಜ್ಯದ ಕರಾವಳಿ, ಗುಡ್ಡಗಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ” ಎಂದು ಬರೆದುಕೊಂಡಿದೆ.ಶುಕ್ರವಾರದಿಂದ ಒಂದು ವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶ್ರೀಲಂಕಾ, ಬಂಗಾಳಕೊಲ್ಲಿ ಭಾಗದಲ್ಲಿ ಮಳೆ ಮಾರುತಗಳು ಸೃಷ್ಟಿಯಾಗುತ್ತಿವೆ.
ಮುಂದಿನ 5 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾದ್ಯತೆಯಿದ್ದು ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. #KSNDMC— Karnataka State Natural Disaster Monitoring Centre (@KarnatakaSNDMC) March 21, 2025