alex Certify Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ‘ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ‘ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಹಲವು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನವರಿ 2 ರಿಂದ 8 ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿಸಾಧಾರಣ ಮಳೆಯಾಗಲಿದೆ. ಜನವರಿ 5 ಮತ್ತು ಜನವರಿ 6 ರಂದು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಶುರುವಾಗಿದೆ. ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣವಿದೆ.

ರಾಜ್ಯದಲ್ಲಿ ಕಳೆದ ವರ್ಷ ವಾಡಿಕೆಗಿಂತ ಸಾಕಷ್ಟು ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ತೀವ್ರ ಬರಗಾಲ ಎದುರಾಗಿತ್ತು, ಆದರೆ ರಾಜ್ಯದಲ್ಲಿ ಈ ವರ್ಷ ಉತ್ತಮ ಮಳೆಯಾಗಲಿದೆ ಎನ್ನಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...