ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಮೈ ಕೊರೆವ ಚಳಿ, ಶೀತಗಾಳಿ ಆರಂಭವಾಗಿದೆ. ಇದರ ಬೆನ್ನಲ್ಲೇ ರಾಜ್ಯದ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಂಕ್ರಾಂತಿ ಬಳಿಕ ಜ.14ರಂದ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಹಾಸನ, ಮಂಡ್ಯ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಹಾವೇರಿ, ಕಲಬುರಗಿ, ಕೊಪ್ಪಳ,ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಚಳಿಯ ಜೊತೆಗೆ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.
Daily weather report dated 11.01.2025 pic.twitter.com/d10n9CKTtJ
— Met centre Bengaluru (@metcentre_bng) January 11, 2025