ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮುಂದಿನ 2 ವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿ.11 ರಿಂದ ಡಿ.18 ರವರೆಗೆ ರಾಜ್ಯದ ಹಲವು ಕಡೆ ಮಳೆಯಾಗಲಿದೆ. ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು. ಹಾಸನ, ಕೊಡಗು, ಮೈಸೂರು,. ತುಮಕೂರು. ಮಂಡ್ಯ. ಚಾಮರಾಜನಗರ, ಬೆಂಗಳೂರು ಗ್ರಾಮಾಂತರ. ಬೆಂಗಳೂರು ನಗರ , ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿ.18 ರಿಂದ 26 ರವರೆಗೆ ಕೊಡಗು, ಮೈಸೂರು, ಮಂಡ್ಯ. ಬೆಂಗಳೂರು ನಗರ. ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ರಾಜ್ಯದ 18 ಕ್ಕೂ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ.ಕರಾವಳಿ ಭಾಗದ ಜಿಲ್ಲೆಗಳಲ್ಲಿ ಡಿಸೆಂಬರ್ 13 ರಿಂದ 18 ರವರೆಗೆ ಭಾರಿ ಮಳೆಯಾಗುವ ಸಂಭವವಿದೆ.