ಬೆಂಗಳೂರು : ಮುಂದಿನ 48 ಗಂಟೆಯಲ್ಲಿ ರಾಜ್ಯದ ಹಲವು ಕಡೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ‘ಹವಾಮಾನ ಇಲಾಖೆ’ ಮುನ್ಸೂಚನೆ ನೀಡಿದೆ.
ಹೌದು, ದಕ್ಷಿಣ ಒಳನಾಡಿನ ಮೈಸೂರು ಮತ್ತು ದಾವಣಗೆರೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ತುಂತುರು ಮಳೆಯಾಗುವ ಮುನ್ಸೂಚನೆ ನೀಡಿದೆ.
ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಯಲ್ಲಿ ಮಳೆ ಸುರಿಯಲಿದೆ. ಅದೇ ರೀತಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಚದುರಿದ ಮಳೆಯಾಗಲಿದೆ.
ವಿಜಯಪುರ, ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ, ವಿಜಯನಗರದಲ್ಲಿ ಕೂಡ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸದ್ಯ, ಬೆಂಗಳೂರು ನಗರದಲ್ಲಿ ಬೆಂಗಳೂರು ನಗರ: 28 ಡಿ.ಸೆ -19 ಡಿ.ಸೆ ಉಷ್ಣಾಂಶವಿದ್ದು, ಮಂಗಳೂರಿನಲ್ಲಿ ಗರಿಷ್ಟ 35 ಡಿ.ಸೆ – 23 ಡಿ.ಸೆ ಉಷ್ಣಾಂಶ ದಾಖಲಾಗಿದೆ.
ನವೆಂಬರ್ 30 ರಿಂದ ಡಿಸೆಂಬರ್ 1ರವರೆಗೆ ತಮಿಳುನಾಡು, ಪುದುಚೇರಿ, ಕಾರೈಕಲ್ ಹಾಗೂ ನವೆಂಬರ್ 30 & ಡಿಸೆಂಬರ್ 1ಕ್ಕೆ ಕೇರಳದಲ್ಲೂ ವಿವಿಧೆಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ,ನೆರೆ ರಾಜ್ಯ ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಚೆನ್ನೈ ನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಕೂಡ ಘೋಷಣೆ ಆಗಿದೆ.