alex Certify Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ‘ಮಳೆ’ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಕಡೆ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಇಂದು ಮಂಗಳವಾರ ಹಾಗೂ ನಾಳೆ ಬುಧವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಇಂದು ಮತ್ತು ನಾಳೆ ಭಾರೀ ಮಳೆ ಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಹಾವೇರಿ, ಕಲಬುರಗಿ, ವಿಜಯಪುರ, ಬೆಳಗಾವಿ, ಬೀದರ್, ಧಾರವಾಡ, ಗದಗ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, , ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ ತುಮಕೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 40-45 ಕಿ.ಮೀ.ನಿಂದ 55 ಕಿ.ಮೀ. ಬೀಸುವ ಸಂಭವವಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...