ನವದೆಹಲಿ: ದೆಹಲಿ ಎನ್ ಸಿ ಆರ್ ಸೇರಿದಂತೆ ಕೆಲವು ಭಾಗಗಳಲ್ಲಿ ಇಂದಿನಿಂದ (ಫೆಬ್ರವರಿ 19) ಫೆಬ್ರವರಿ 21 ರವರೆಗೆ ಗುಡುಗು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಂತಹ ಇತರ ರಾಜ್ಯಗಳು ಸೋಮವಾರದಿಂದ ಬುಧವಾರದವರೆಗೆ ಸಾಧಾರಣ ಮಳೆಗೆ ಸಾಕ್ಷಿಯಾಗಬಹುದು ಎಂದು ಮುನ್ಸೂಚನೆಯಲ್ಲಿ ತಿಳಿಸಿದೆ.
ಸೋಮವಾರ ಬೆಳಿಗ್ಗೆ ದೆಹಲಿಯಲ್ಲಿ ಭಾಗಶಃ ಮೋಡ ಕವಿದ ಆಕಾಶ ಮತ್ತು ಮಂಜು ಕವಿದ ವಾತಾವರಣವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಳಿಗ್ಗೆ 8.30 ಕ್ಕೆ ಸಾಪೇಕ್ಷ ಆರ್ದ್ರತೆಯು ಶೇಕಡಾ 74 ರಷ್ಟಿತ್ತು ಎಂದು ಭಾರತೀಯ ಹವಾಮಾನ ಇಲಾಖೆಯ ಬುಲೆಟಿನ್ ತಿಳಿಸಿದೆ.