
ಬೆಂಗಳೂರು: ಮೇ 17 ಮತ್ತು 18ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಒಳನಾಡು ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಮೇಲ್ಮೈ ಸುಳಿಗಾಳಿ ಮಧ್ಯಪ್ರದೇಶ ಭಾಗದಿಂದ ಕರ್ನಾಟಕದ ಒಳನಾಡು ಮಾರ್ಗವಾಗಿ ತಮಿಳುನಾಡಿನ ಕಡೆಗೆ ಚಲಿಸುತ್ತಿದೆ. ಗಾಳಿ ಬೀಸುವ ದಿಕ್ಕಿನ ಬದಲಾವಣೆಯೊಂದಿಗೆ ಲಕ್ಷದ್ವೀಪದಲ್ಲಿ ಸುಳಿಗಾಳಿ ಕಂಡುಬಂದಿದೆ. ಇದರಿಂದ ಕರಾವಳಿ ಸೇರಿ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಕರಾವಳಿಯಲ್ಲಿ ಮೇ 21 ರವರೆಗೆ ಮಳೆ ಮುಂದುವರಿಯಲಿದೆ.
ಮೇ 18 ರಂದು ಭಾರಿ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ವೇಗದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.