
ಬೆಂಗಳೂರು: ಜೂನ್ 26ರಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವ ಇದೆ. ಅದೇ ರೀತಿ ಮಲೆನಾಡು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ 45 ರಿಂದ 50 ಕಿ.ಮೀ. ವೇಗದ ಗಾಳಿ ಸಹಿತ ಭಾರಿ ಮಳೆಯಾಗುವ ಸಂಭವವಿದೆ.
ದಕ್ಷಿಣ ಮತ್ತು ಉತ್ತರ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ನಿರಂತರ ಗಾಳಿ ಸಹಿತ ಹಗುರದಿಂದ ಕೂಡಿದ ಮಳೆಯಾಗುವ ಸಂಭವ ಇದೆ.
ಜೂನ್ 27ರಂದು ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಕರಾವಳಿ ಭಾಗದಲ್ಲಿ ಬುಧವಾರ ಗಂಟೆಗೆ 55 ಕಿ.ಮೀ. ವರೆಗೂ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, 3.6 ಮೀಟರ್ ಎತ್ತರದ ಅಲೆಗಳು ಏಳುವ ಸಂಭವ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.