ಬೆಂಗಳೂರು : ಕರ್ನಾಟದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇಂದಿನಿಂದ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇಂದು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮೀನಿಗಾರರಿಗೆ ಎಚ್ಚರಿಕೆ ನೀಡಲಾಗಿದೆ. ನಾಳೆಯಿಂದ 2 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.