![](https://kannadadunia.com/wp-content/uploads/2019/08/monsoon-rain-1.jpg)
ಬೆಂಗಳೂರು: ಇಂದಿನಿಂದ 10 ದಿನ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಒಂದು ವಾರದಿಂದ ಮೋಡಕವಿದ ವಾತಾವರಣ ಇದೆ. ಕರಾವಳಿ ಮತ್ತು ಒಳನಾಡು ಭಾಗದ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ಶನಿವಾರದಿಂದ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ. ಸೆಪ್ಟೆಂಬರ್ 22 ರಿಂದ 10 ದಿನಗಳ ಕಾಲ ವಾಡಿಕೆ, ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 3ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಮಳೆಯ ಕೊರತೆ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ. ಮಳೆ ಇಲ್ಲದೇ ಬೆಳೆಗಳು ಒಳಗಲಾರಂಭಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಹೊತ್ತಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದು ರೈತರಲ್ಲಿ ಆಶಾಭಾವನೆ ತಂದಿದೆ.