ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗುತ್ತಿದೆ.
ಮಾರ್ಚ್ 26 ರಿಂದ 30 ರವರೆಗೆ ರಾಜ್ಯದ ಕರಾವಳಿ ಪ್ರದೇಶದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ದಕ್ಷಿಣ ಒಳನಾಡು ಭಾಗದ ಮೈಸೂರು, ರಾಮನಗರ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಭಾಗದ ಬೆಳಗಾವಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಮಾರ್ಚ್ 26 ರ ಇಂದು ಸಾಧಾರಣ ಮಳೆಯಾಗಲಿದೆ. ಅಕಾಲಿಕ ಮಳೆಯಿಂದಾಗಿ ಬೆಳೆದು ನಿಂತಿದ್ದ ಬೆಳೆ ಹಾಳಾಗಿ ರೈತರಿಗೆ ಸಂಕಷ್ಟ ಉಂಟುಮಾಡಿದೆ. ಮಾವು ಬೆಳೆಗೆ ಹಾನಿಯಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ ಬೆಳೆದು ನಿಂತಿದ್ದ ಬಿಳಿಜೋಳ ನೆಲಕ್ಕುರುಳಿದೆ. ಕಳೆದ ಎರಡು ದಿನಗಳಲ್ಲಿ ರಾಜ್ಯದ ಹಲವು ಭಾಗದಲ್ಲಿ ಮಳೆಯಾಗಿ ರೈತರಿಗೆ ಸಂಕಷ್ಟ ತಂದಿದೆ.ಅಡಿಕೆ, ತೆಂಗು ಮೊದಲಾದ ಬೆಳೆಗೆ ಅನುಕೂಲವಾಗಿದೆ ಎನ್ನಲಾಗಿದೆ.