alex Certify ಶನಿವಾರವೇ ರಾಜ್ಯಕ್ಕೆ ಮುಂಗಾರು ಪ್ರವೇಶ: ಇನ್ನೆರಡು ದಿನದಲ್ಲಿ ಹಲವು ಪ್ರದೇಶಗಳಿಗೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶನಿವಾರವೇ ರಾಜ್ಯಕ್ಕೆ ಮುಂಗಾರು ಪ್ರವೇಶ: ಇನ್ನೆರಡು ದಿನದಲ್ಲಿ ಹಲವು ಪ್ರದೇಶಗಳಿಗೆ ವಿಸ್ತರಣೆ

ಬೆಂಗಳೂರು: ಗುರುವಾರ ಕೇರಳಕ್ಕೆ ಪ್ರವೇಶಿಸಿದ್ದ ಮುಂಗಾರು ರಾಜ್ಯಕ್ಕೆ ಶನಿವಾರ  ಎಂಟ್ರಿ ಕೊಟ್ಟಿದೆ. ಮುಂದಿನ ಎರಡು ದಿನಗಳಲ್ಲಿ ಮತ್ತಷ್ಟು ಪ್ರದೇಶಗಳಿಗೆ ವ್ಯಾಪಿಸಲಿದೆ.

ಮಡಿಕೇರಿ, ಕಾರವಾರದವರೆಗೆ ಮುಂಗಾರು ಮಳೆ ವ್ಯಾಪಿಸಿದ್ದು ರಾಜ್ಯದ ಹಲವು ಪ್ರದೇಶಗಳಿಗೆ ವಿಸ್ತರಿಸಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಐದು ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ. ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗಲಿದೆ. ಜೂನ್ 11 ರಿಂದ 15 ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಸಾಧಾರಣ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...