
ಬೆಂಗಳೂರು: ಸೆಪ್ಟೆಂಬರ್ 11 ರಿಂದ 4 ದಿನಗಳ ಕಾಲ ರಾಜ್ಯದ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಒಳನಾಡಿನಲ್ಲಿ ಮುಂಗಾರು ಮಳೆ ದುರ್ಬಲವಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಸೆಪ್ಟೆಂಬರ್ 11 ರಿಂದ 14ರ ವರೆಗೆ ಕರಾವಳಿಯ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿದೆ.