alex Certify ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಇನ್ನು ಕೆಲವು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆವರೆಗೆ ಕರಾವಳಿಯ ಬಹುತೇಕ ಭಾಗದಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆ ಸೋಮವಾರ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.

ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...