alex Certify ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ: 2 ದಿನ ರಾಜ್ಯದ ಹಲವೆಡೆ ಧಾರಾಕಾರ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ: 2 ದಿನ ರಾಜ್ಯದ ಹಲವೆಡೆ ಧಾರಾಕಾರ ಮಳೆ ಸಾಧ್ಯತೆ

ಬೆಂಗಳೂರು: ಎರಡು ದಿನ ರಾಜ್ಯದ ಕೆಲವೆಡೆ ಧಾರಾಕಾರ ಮತ್ತೆ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಅರಬ್ಬಿ ಸಮುದ್ರದ ಲಕ್ಷದ್ವೀಪ ಪ್ರದೇಶದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ನವೆಂಬರ್ 8 ರವರೆಗೆ ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 7, 8 ರಂದು ಧಾರಾಕಾರ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಲಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 9, 10 ರಾಜ್ಯದಲ್ಲಿ ಒಣಹವೆ ಇರಲಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...