ಬೆಂಗಳೂರು: ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಭಾನುವಾರ, ಸೋಮವಾರ ಉತ್ತಮ ಮಳೆಯಾಗುವ ಸಂಭವ ಇದೆ.
ಭಾರತೀಯ ಹವಾಮಾನ ಇಲಾಖೆಯಿಂದ ಈ ಕುರಿತು ಮುನ್ಸೂಚನೆ ನೀಡಲಾಗಿದ್ದು, ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಭಾನುವಾರ ಮತ್ತು ಸೋಮವಾರ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಒಳನಾಡು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿ ಬೀಸಲಿದೆ. ಕರಾವಳಿ ಪ್ರದೇಶದಲ್ಲಿ 40 ರಿಂದ 55 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.