ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಹಾರಾಷ್ಟ್ರ ಕರಾವಳಿ ಭಾಗದಿಂದ ಕೇರಳ ಕರಾವಳಿಯತ್ತ ಮುಂಗಾರು ಮಾರುತಗಳು ಚಲಿಸುತ್ತಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 29ರಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಆರೆಂಜ್ ಅಲರ್ಟ್ ನೀಡಲಾಗಿದೆ. ಜೂನ್ 30 ರಿಂದ ಜುಲೈ 3ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜೂನ್ 29 ರಿಂದ ಜುಲೈ 1 ರವರೆಗೆ ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.