ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅ. 16ರಿಂದ 4 ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅ.16ರಿಂದ 19ರವರೆಗೆ ಸಾಧಾರಣ ಮಳೆ ಆಗಲಿದೆ. ಅ. 16 ರಿಂದ 19 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ. ಅ.ರ್ 17ರಂದು ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.