alex Certify ಗಮನಿಸಿ…! ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿ ಭಾಗದಲ್ಲಿ ಇಂದಿನಿಂದ ಜೂನ್ 16 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ಇತ್ತೀಚೆಗೆ ಆರಂಭಗೊಂಡ ಮುಂಗಾರು ಬಿಡುವು ಪಡೆದುಕೊಂಡಿದ್ದು ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮತ್ತೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಜೂನ್ 16 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 50 ಕಿ.ಮೀ. ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಜೂನ್ 14 ಮತ್ತು 15 ರಂದು ಹಾವೇರಿ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...