ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಪ್ರಬಲ ‘ಯಾಸ್’ ಚಂಡಮಾರುತ ಅಬ್ಬರದ ಕಾರಣ ರಾಜ್ಯದ ಹಲವೆಡೆ ಮಂಗಳವಾರ ಭಾರಿ ಮಳೆಯಾಗಿದೆ. ಮೇ 29 ರವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ರಾಜ್ಯದ ಹಲವೆಡೆ ಈಗಾಗಲೇ ಭಾರೀ ಮಳೆಯಾಗಿದ್ದು, ಮೇ 29ರ ವರೆಗೆ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿ ಪ್ರದೇಶಕ್ಕೆ ಮೇ 26 ರಂದು ಚಂಡಮಾರುತ ಅಪ್ಪಳಿಲಿದೆ. ಭಾರೀ ಗಾಳಿ ಮಳೆಯ ಕಾರಣ ಮುನ್ನೆಚ್ಚರಿಕೆ ವಹಿಸಲಾಗಿದೆ.