alex Certify ಗಮನಿಸಿ..! ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಮತ್ತೊಂದು ಸೈಕ್ಲೋನ್ ಪರಿಣಾಮ ಡಿ. 4 ರಿಂದ ಭಾರೀ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ..! ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಮತ್ತೊಂದು ಸೈಕ್ಲೋನ್ ಪರಿಣಾಮ ಡಿ. 4 ರಿಂದ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ 24 ಗಂಟೆಯೊಳಗೆ ‘ಬುರೇವಿ’ ಚಂಡಮಾರುತ ಸೃಷ್ಟಿಯಾಗಲಿದೆ. ಡಿಸೆಂಬರ್ 4 ರಿಂದ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಶ್ರೀಲಂಕಾ ಕರಾವಳಿಯಲ್ಲಿ ಡಿಸೆಂಬರ್ 2 ರ ಇಂದು ಸಂಜೆ ಅಥವಾ ರಾತ್ರಿ ಚಂಡಮಾರುತ ಹಾದುಹೋಗಲಿದ್ದು, ತಮಿಳುನಾಡು ಕನ್ಯಾಕುಮಾರಿ ಕರಾವಳಿಗೆ ಡಿಸೆಂಬರ್ 3 ರಂದು ಅಪ್ಪಳಿಸಲಿದೆ. ಇದರ ಪರಿಣಾಮ ರಾಜ್ಯದಲ್ಲಿ ಡಿಸೆಂಬರ್ 4 ರಿಂದ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ 8 ರವರೆಗೆ ಭಾರೀ ಮಳೆಯಾಗಲಿದೆ. ಅದೇ ರೀತಿ ಉತ್ತರ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...