ಚಿತ್ರದುರ್ಗ: ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ.
ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8, ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 13 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 6.8 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 9.6 ಮಿ.ಮೀ ಮಳೆಯಾಗಿದೆ.
80 ಮನೆಗಳು ಭಾಗಶಃ ಹಾನಿ:
ಗುರುವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಭಾಗಶಃ ಹಾನಿಯಾಗಿದ್ದು, 3 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ ವರದಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 24 ಮನೆಗಳು ಭಾಗಶಃ ಹಾನಿ, ಚಳ್ಳಕೆರೆ 15 ಮನೆಗಳು, ಹೊಳಲ್ಕೆರೆ 14 ಮನೆಗಳು, ಹೊಸದುರ್ಗ 5 ಮನೆಗಳು ಭಾಗಶಃ ಹಾನಿ ಹಾಗೂ 3 ಮನೆಗಳಿಗೆ ನೀರು ನುಗ್ಗಿವೆ. ಹಿರಿಯೂರು ತಾಲ್ಲೂಕಿನಲ್ಲಿ 17 ಮನೆಗಳು ಭಾಗಶಃ ಹಾನಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 5 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.