alex Certify ಗಮನಿಸಿ…! ವಾಯುಭಾರ ಕುಸಿತ ಪರಿಣಾಮ ಇನ್ನೂ 3 ದಿನ ಭಾರಿ ಮಳೆ, ಆರೆಂಜ್ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ವಾಯುಭಾರ ಕುಸಿತ ಪರಿಣಾಮ ಇನ್ನೂ 3 ದಿನ ಭಾರಿ ಮಳೆ, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ 18 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರ ವರೆಗೂ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಮುಂದಿನ ಎರಡು ದಿನ ಮಳೆ ಹೆಚ್ಚಾಗಲಿದೆ. ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರಿನಲ್ಲಿ ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಅರಬ್ಬೀ ಸಮುದ್ರದಲ್ಲಿ ಚಂಡಮಾರುತವೇಳುಸ ಸಾಧ್ಯತೆ ಕೂಡ ಇರುವುದರಿಂದ ಇನ್ನೂ ಮೂರು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...