ಬೆಂಗಳೂರು: ಅಸಾನಿ ಚಂಡಮಾರುತ ಪ್ರಭಾವ ಕಡಿಮೆಯಾಗಿದ್ದರೂ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು, ಕರಾವಳಿ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆಯಲಿದೆ. ರಾಜ್ಯಾದ್ಯಂತ ಮೋಡ ಕವಿದ ವಾತಾವರಣವಿದ್ದು, 22 ವರ್ಷಗಳ ಇತಿಹಾಸದಲ್ಲಿ ಮೇ ತಿಂಗಳಲ್ಲಿ ಚಳಿಯ ತೀವ್ರತೆ ಹೆಚ್ಚು ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಸೋನೆ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಬೆಳೆಹಾನಿಯಾಗಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ.