alex Certify ರಾಜ್ಯದ ಹಲವೆಡೆ ಆ. 20 ರವರೆಗೆ ಧಾರಾಕಾರ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಹಲವೆಡೆ ಆ. 20 ರವರೆಗೆ ಧಾರಾಕಾರ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಚುರುಕುಗೊಂಡಿದ್ದು, ಬೆಂಗಳೂರು ಸೇರಿ ಹಲವಡೆ ಮಳೆಯಾಗಿದೆ. ಆಗಸ್ಟ್ 20ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಬೀದರ್, ಗದಗ, ಧಾರವಾಡ, ವಿಜಯಪುರ, ಕೊಪ್ಪಳ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...