
ಬೆಂಗಳೂರು: ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಕೋಲಾರ, ಹಾಸನ, ಮೈಸೂರು, ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಮುಂದುವರೆದ ಪರಿಣಾಮ ರಾಜ್ಯದಲ್ಲಿ ಮಳೆಯ ವಾತಾವರಣವಿದ್ದು, ಥಂಡಿ ಹವಾ ಹೆಚ್ಚಾಗಿದೆ. ತುಂತುರು ಮಳೆ ಕೆಲವೆಡೆ ಮುಂದುವರೆದಿದ್ದು, ಕರಾವಳಿ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.