alex Certify ಗಮನಿಸಿ…! ಮೇಲ್ಮೈ ಸುಳಿಗಾಳಿ, ಹವಾಮಾನ ವೈಪರೀತ್ಯದ ಪರಿಣಾಮ ರಾಜ್ಯದೆಲ್ಲೆಡೆ ಇನ್ನು 4 ದಿನ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಮೇಲ್ಮೈ ಸುಳಿಗಾಳಿ, ಹವಾಮಾನ ವೈಪರೀತ್ಯದ ಪರಿಣಾಮ ರಾಜ್ಯದೆಲ್ಲೆಡೆ ಇನ್ನು 4 ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ನಾಲ್ಕು ದಿನ ವ್ಯಾಪಕ ಮಳೆ ಸುರಿಯುವ ನಿರೀಕ್ಷೆ ಇದೆ. ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ವೈಪರೀತ್ಯದ ಪರಿಣಾಮ ರಾಜ್ಯದಲ್ಲಿ ಆಗಸ್ಟ್ 26 ರವರೆಗೆ ಮುಂಗಾರು ಚುರುಕುಗೊಳ್ಳಲಿದ್ದು, ಎಲ್ಲ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಶ್ರೀಲಂಕಾದ ಕರಾವಳಿ ಪ್ರದೇಶದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿರುವ ಪರಿಣಾಮದಿಂದ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕಳೆದ ಎರಡು, ಮೂರು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮುಂದುವರಿಯಲಿದೆ. ಅದೇ ರೀತಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಹಲವೆಡೆ ಬಿಸಿಲಿನ ವಾತಾವರಣ ಕಂಡು ಬಂದರೂ ಕೂಡ ಮೋಡಮುಸುಕಿದ ವಾತಾವರಣ ಮುಂದುವರಿದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...