
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಕ್ಟೋಬರ್ 29 ರಿಂದ ಮೂರು ದಿನ ವ್ಯಾಪಕ ಮಳೆಯಾಗುವ ಸಂಭವ ಇದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಕ್ಟೋಬರ್ 29ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.
ಅಕ್ಟೋಬರ್ 30 ಮತ್ತು 31 ರಂದು ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ ವ್ಯಾಪಕ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಅಕ್ಟೋಬರ್ 29 ರಿಂದ 3 ದಿನ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದ್ದು, ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.