ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 5 ಮತ್ತು 6 ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ 8 ರವರೆಗೆ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಅದೇ ರೀತಿ, ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಆಗಸ್ಟ್ 5 ಮತ್ತು 6 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕರ್ನಾಟಕದ ಹಾವೇರಿ, ಗದಗ, ವಿಜಯಪುರ, ಕಲಬುರ್ಗಿ, ಧಾರವಾಡ, ಯಾದಗಿರಿ, ರಾಯಚೂರು, ಬೆಳಗಾವಿ, ಬೀದರ್ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹೇಳಲಾಗಿದೆ.