
ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡ ಕಾರಣ ಮುಂದಿನ ಎರಡು ದಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ಶಿವಮೊಗ್ಗ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್ 10, 11 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.