ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶದಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಭಾಗದಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ.
ಆಗಸ್ಟ್ 27ರಿಂದ 29 ರವರೆಗೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.