ಬೆಂಗಳೂರು: ಶನಿವಾರದಿಂದ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಪ್ರದೇಶ, ಉತ್ತರ ಒಳನಾಡು, ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಸೆಪ್ಟಂಬರ್ 23ರಿಂದ 4 ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹೇಳಲಾಗಿದೆ,
ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳ ವ್ಯಾಪ್ತಿಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವ ಇದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು, ಉಳಿದ ಜಿಲ್ಲೆಗಳ ವ್ಯಾಪ್ತಿಯಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.