![](https://kannadadunia.com/wp-content/uploads/2020/11/heavy_rain_jpg-2-1.jpg)
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದೆ.
ಶನಿವಾರ ಸಂಜೆಯಿಂದ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳ ಹಲವೆಡೆ ಧಾರಾಕಾರ ಮಳೆಯಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆ ಮುಂದುವರಿಯಲಿದೆ.
ಅಕ್ಟೋಬರ್ 24 ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಧಾರಕಾರ ಮಳೆಯಾಗಲಿದ್ದು, ಅ. 24 ರಿಂದ 27 ರವರೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಅಕ್ಟೋಬರ್ 25, 26 ರಂದು ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮೈಸೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.