alex Certify ಗಮನಿಸಿ…! ರಾಜ್ಯದ ಹಲವೆಡೆ ಇನ್ನೂ ಕೆಲವು ದಿನ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ರಾಜ್ಯದ ಹಲವೆಡೆ ಇನ್ನೂ ಕೆಲವು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಭಾಗದಲ್ಲಿ ಸೋಮವಾರ ಭಾರೀ ಮಳೆಯಾಗಿದೆ. ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ.

ಇನ್ನೂ ಕೆಲವು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 10 ರಿಂದ 12 ರವರೆಗೆ ಕರಾವಳಿ ಭಾಗದ ಹಲವೆಡೆ ಮಳೆಯಾಗಲಿದೆ.

ಮೇ 13 ಮತ್ತು 14 ರಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡು ಭಾಗದಲ್ಲಿ ಮೇ 14 ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಮೇ 12 ರಂದು ದಕ್ಷಿಣ ಒಳನಾಡು ಭಾಗದ ಎಲ್ಲಾ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...