alex Certify ರಾಜ್ಯದೆಲ್ಲೆಡೆ ಇನ್ನೂ ಎರಡು ದಿನ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದೆಲ್ಲೆಡೆ ಇನ್ನೂ ಎರಡು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಕರಾವಳಿ, ಉತ್ತರ ಒಳನಾಡಿನ ಕೆಲವು ಕಡೆ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದ್ದು, ಇನ್ನೂ ಎರಡು ದಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 20ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ,  ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ, ಬಳ್ಳಾರಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಲವು ಕಡೆ ಮಳೆ ಆಗುವ ಸಾಧ್ಯತೆ ಇದೆ.

ಏಪ್ರಿಲ್ 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಹಾಸನ, ಚಿಕ್ಕಮಗಳೂರು, ಹಾವೇರಿ, ಧಾರವಾಡ, ಶಿವಮೊಗ್ಗ, ಮೈಸೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆ ಮಳೆ ಆಗುವ ಸಾಧ್ಯತೆ ಇದೆ. ಉಳಿದೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...