alex Certify ಬಿಸಿಲ ಝಳಕ್ಕೆ ತತ್ತರಿಸಿದ ಜನತೆಗೆ ತಂಪೆರದ ಬೇಸಿಗೆ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಸಿಲ ಝಳಕ್ಕೆ ತತ್ತರಿಸಿದ ಜನತೆಗೆ ತಂಪೆರದ ಬೇಸಿಗೆ ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ಬೇಸಿಗೆ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪಿನ ಅನುಭವ ಆಗಿದೆ.

ಮಂಗಳೂರು, ಗದಗ, ಧಾರವಾಡ ಜಿಲ್ಲೆಗಳಲ್ಲಿ ಬೇಸಿಗೆ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ಮಳೆಯಾಗಿದೆ. ಮಂಗಳೂರು, ಪುತ್ತೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳ ಭಾಗದಲ್ಲಿ ಭಾರಿ ಮಳೆಯಾಗಿದೆ.

ಹುಬ್ಬಳ್ಳಿ, ಗದಗ, ನವಲಗುಂದದಲ್ಲಿ ಕೂಡ ಕೆಲಕಾಲ ಮಳೆಯಾಗಿದ್ದು, ಬಿಸಿಲಿನ ಝಳಕ್ಕೆ ತತ್ತರಿಸಿದ ಜನತೆಗೆ ತಂಪಿನ ಅನುಭವವಾಗಿದೆ. ಬರಗಾಲದಿಂದ ತತ್ತರಿಸಿದ ಜನತೆಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ತಾಪಮಾನ ಹೆಚ್ಚಳದಿಂದ ಬೇಸಿಗೆ ಬಿಸಿಲ ಝಳದಿಂದ ಜನ ತತ್ತರಿಸಿದ್ದಾರೆ. ಬೆಳೆಗಳ ಉಳಿಸಿಕೊಳ್ಳಲು ರೈತರು ಮಳೆಗಾಗಿ ಎದುರು ನೋಡುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...