alex Certify ಗಮನಿಸಿ…! ಮಾರ್ಚ್ 24 ರವರೆಗೆ ರಾಜ್ಯದ ಹಲವೆಡೆ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಮಾರ್ಚ್ 24 ರವರೆಗೆ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಮಾರ್ಚ್ 24 ರವರೆಗೆ ರಾಜ್ಯದ 8 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಕೆಲವು ಕಡೆ ಮಳೆಯಾಗಲಿದೆ. ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮತ್ತು ಮೈಸೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಮಳೆಯಾದ ನಂತರ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...