alex Certify ಮಾ. 31 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾ. 31 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮಾರ್ಚ್ 31 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಕ್ಷಿಣ ಒಳನಾಡಿನ ಕೋಲಾರ, ಮಂಡ್ಯ, ಮೈಸೂರು ಭಾಗದಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...