ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಮುಂದುವರೆದಿದೆ. ಇನ್ನೂ ಒಂದು ವಾರ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 6ರಿಂದ 12ರ ವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಅಕ್ಟೋಬರ್ 7ರಿಂದ 9ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಅಕ್ಟೋಬರ್ 7ರಿಂದ 9ರವರೆಗೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆ ಆಗಲಿದೆ. ಅಕ್ಟೋಬರ್ 6ರಂದು ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಕ್ಟೋಬರ್ 7ರಂದು ಮೈಸೂರು, ಬಳ್ಳಾರಿ ಚಾಮರಾಜನಗರ, ಅಕ್ಟೋಬರ್ 8ರಂದು ಬಳ್ಳಾರಿ, ವಿಜಯನಗರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ ಜಿಲ್ಲೆ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಅಕ್ಟೋಬರ್ 9ರಿಂದ 12ರವರೆಗೆ ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಅಕ್ಟೋಬರ್ 6 ಮತ್ತು 7ರಂದು ಸಾಧಾರಣ, ಅಕ್ಟೋಬರ್ 8ರಂದು ಅತಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.