alex Certify ನಾಳೆ ‘ಮಳೆ ಹುಡುಗಿ’ ಪೂಜಾ ಗಾಂಧಿ ಮದುವೆ : ಮಂತ್ರ ಮಾಂಗಲ್ಯಕ್ಕೆ ಮನಸೋತ ನಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ‘ಮಳೆ ಹುಡುಗಿ’ ಪೂಜಾ ಗಾಂಧಿ ಮದುವೆ : ಮಂತ್ರ ಮಾಂಗಲ್ಯಕ್ಕೆ ಮನಸೋತ ನಟಿ

ಬೆಂಗಳೂರು : ‘ಮಳೆ ಹುಡುಗಿ’ ಪೂಜಾ ಗಾಂಧಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ನವೆಂಬರ್ 29ರಂದು ಪೂಜಾ ಗಾಂಧಿ ಅವರು ದಾಂಪತ್ಯ ಬದುಕಿಗೆ ಕಾಲಿಡುತ್ತಿದ್ದಾರೆ.

ಲಾಜಿಸ್ಟಿಕ್ ಕಂಪನಿಯ ಉದ್ಯಮಿ ವಿಜಯ್ ಎಂಬುವವರ ಜೊತೆಗೆ ಪೂಜಾ ಗಾಂಧಿ ಸಪ್ತಪದಿ ತುಳಿಯುತ್ತಿದ್ದಾರೆ . ಮಂತ್ರ ಮಾಂಗಲ್ಯದ ಮೂಲಕ ಬಹಳ ಸಿಂಪಲ್ ಆಗಿ ಮದುವೆ ಆಗಲು ನಿರ್ಧರಿಸಿದ್ದಾರೆ.

2001ರಲ್ಲಿ ಹಿಂದಿ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಪೂಜಾ ಗಾಂಧಿ ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮುಂಗಾರು ಮಳೆ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಗಿ ಕನ್ನಡ ಸಿನಿಮಾ ಲೋಕದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಈ ಸಿನಿಮಾದ ಮೂಲಕ ಕನ್ನಡಿಗರೊಗೆ ಪರಿಚಯ ಆದ ಪೂಜಾ ಗಾಂಧಿ ಮಳೆ ಹುಡುಗಿ ಎಂದೇ ಫೇಮಸ್ ಆದರು. ನಂತರ ಕನ್ನಡದ ಸಾಲು ಸಾಲು ಸಿನಿಮಾಗಳಲ್ಲಿ ಅವಕಾಶ ಪಡೆದರು. ಸದ್ಯ ಮಳೆ ಹುಡುಗಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...