
ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯ ಆರ್ಭಟ ಮುಂದುವರೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದ ಕುಮಾರಧಾರಾ ಸಮೀಪ ಪರ್ವತಮುಖಿಯಲ್ಲಿ ಸೋಮವಾರ ರಾತ್ರಿ ಮನೆ ಮೇಲೆ ಗುಡ್ಡ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿದ ಮಕ್ಕಳು ಮೃತಪಟ್ಟಿದ್ದಾರೆ. ಕುಮಾರಧಾರ ಮತ್ತು ರೂಪಶ್ರೀ ಮಕ್ಕಳಾದ ಶ್ರುತಿ(11), ಜ್ಞಾನಶ್ರೀ(8) ಮೃತಪಟ್ಟವರು ಎಂದು ಹೇಳಲಾಗಿದೆ.