ಗುಜರಾತ್ : ಗುಜರಾತ್ ನಲ್ಲಿ ಮಹಾಮಳೆಯ ಆರ್ಭಟ ಮುಂದುವರೆದಿದ್ದು, ಇದುವರೆಗೆ 11 ಮಂದಿ ಮೃತಪಟ್ಟಿದ್ದಾರೆ.
ಗುಜರಾತ್ ನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರಗಳು ಮತ್ತು ಹಳ್ಳಿಗಳ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರ ಮಳೆಯಿಂದಾಗಿ ಗುಜರಾತ್ ನಲ್ಲಿ ಈವರೆಗೆ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ.
ಭಾರಿ ಮಳೆಯಿಂದಾಗಿ ಸಿಲುಕಿದ್ದ ಜನರನ್ನು ಏರ್ ಲಿಪ್ಟ್ ಮಾಡಲು ಭಾರತೀಯ ವಾಯುಪಡೆ (ಐಎಎಫ್) ವಿಮಾನವನ್ನು ನಿಯೋಜಿಸಿದೆ.ನಗರಗಳು ಮತ್ತು ಹಳ್ಳಿಗಳ ತಗ್ಗು ಪ್ರದೇಶಗಳು ಜಲಾವೃತವಾಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.