ಬೆಂಗಳೂರು : ರಣಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಮಾಧಾನಕರ ಸುದ್ದಿ ನೀಡಿದೆ. ರಾಜ್ಯದ ಹಲವೆಡೆ ಏ.18 ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಕಡೆ ಮಳೆಯಾಗುತ್ತಿದ್ದು, ಏಪ್ರಿಲ್ 18 ರಿಂದ ಕರ್ನಾಟಕದಾದ್ಯಂತ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಏ.18ರ ಬಳಿಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ಕಲಬುರಗಿ, ರಾಯಚೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ವಿಜಯಪುರ, ಬಳ್ಳಾರಿ, , ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ವಿಜಯನಗರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ 2 ದಿನದಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ತರೀಕೆರೆ, ಶೃಂಗೇರಿ, ಬಾಳೆಹೊನ್ನೂರು ಸೇರಿದಂತೆ ಹಲವು ಕಡೆ ಮಳೆಯಾಗುತ್ತಿದೆ. ಹಾಗೂ ಆಗುಂಬೆಯಲ್ಲಿ ಕೂಡ ಸಾಧಾರಣ ಮಳೆಯಾಗಿದೆ.