ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನವೆಂಬರ್ 22ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಧಾರವಾಡ, ಗದಗ, ಚಾಮರಾಜನಗರ, ಚಿಕ್ಕಮಗಳೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಸಹ ಭಾರೀ ಮಳೆಯಾಗಲಿದೆ. ಹಾಗೂ ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಚಿಕ್ಕಬಳ್ಳಾಪುರ, ಕೊಪ್ಪಳ, ಗದಗ, , ಶಿವಮೊಗ್ಗ, ಕೋಲಾರ, ಕೊಡಗು, ಹಾಸನದಲ್ಲಿ ಮೈಸೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.
ಬೆಂಗಳೂರು ಸೇರಿ ರಾಜ್ಯದಲ್ಲಿ ವರುಣ ಅಬ್ಬರಿಸಲಿದ್ದು, ಕರಾವಳಿ ಜಿಲ್ಲೆಯಲ್ಲಿ ಕೂಡ ಅಬ್ಬರದ ಮಳೆಯಾಗಲಿದೆ. ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವರುಣ ಅಬ್ಬರಿಸಲಿದ್ದು, ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೈಸೂರು, ಮಂಡ್ಯ, ಚಿಕ್ಕಮಗಳೂರು, ಕೋಲಾರ, ಚಾಮರಾಜನಗರದಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.