ಬೆಂಗಳೂರು : ರಾಜ್ಯದ ಹಲವು ಕಡೆ ವರುಣನ ಆರ್ಭಟ ಜೋರಾಗಿದ್ದು, ಈ ಹಿನ್ನೆಲೆ ರಾಜ್ಯದ ವಿವಿಧ ಕಡೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಯಾದಗಿರಿ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾದಗಿರಿ, ಸುರಪುರ, ಹುಣಸಗಿ, ಶಹಾಪುರ, ವಡಗೆರಾ, ಗುರುಮಠಕಲ್ ತಾಲೂಕುಗಳಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ರಜೆ ನೀಡಲಾಗಿದೆ. ಭಾನುವಾರ ಶಾಲೆಗಳನ್ನು ನಡೆಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಪಟ್ಟಣದ ಸೇಂಟ್ ಮೇರಿಸ್ ಶಾಲೆ, ವಾಗ್ದೇವಿ ಶಾಲೆ, ಸಹ್ಯಾದ್ರಿ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಉಳಿದ ಶಾಲೆಗಳಿಗೆ ಪರಿಸ್ಥಿತಿ ನೋಡಿ ರಜೆ ನೀಡುವಂತೆ ಬಿಇಒ ಸೂಚನೆ ನೀಡಿದ್ದಾರೆ.
ಮುಂದಿನ 3 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ‘ಮಳೆ’ ‘ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಒಳನಾಡು ಬೆಳಗಾವಿ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಯಲ್ಲೂ ಕೂಡ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಪ್ರದೇಶದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವಡೆ ಮುಂದಿನ 3 ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.